ಪ್ರಧಾನಿ ಮೋದಿ ಜನ್ಮ ದಿನ- ನಿಡ್ಪಳ್ಳಿ ದೇವಾಲಯದಲ್ಲಿ ವಿಶೇಷ ಪೂಜೆ, ಸಿಹಿ ತಿಂಡಿ ವಿತರಣೆ

0

ನಿಡ್ಪಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ 76 ನೇ ಜನ್ಮ ದಿನಾಚರಣೆ ಪ್ರಯುಕ್ತ ಸೆ.17 ರಂದು ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನಿಡ್ಪಳ್ಳಿ ಗ್ರಾಮ  ಬಿ.ಜೆ.ಪಿ ಶಕ್ತಿ ಕೆಂದ್ರದ  ವತಿಯಿಂದ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.ಪ್ರಧಾನ ಆರ್ಚಕ ನವೀನ್ ಹೆಬ್ಬಾರ್ ಪೂಜೆ ಸಲ್ಲಿಸಿ ಮೋದಿಯವರ ಉತ್ತಮ ಆರೋಗ್ಯಕ್ಕಾಗಿ  ಪ್ರಾರ್ಥಿಸಿದರು.

ಬಿ.ಜೆ.ಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಕುಮಾರ್.ಬಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ, ಆಡಳಿತ ಮಂಡಳಿ ಸದಸ್ಯರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು. ನಂತರ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here