







ಬಡಗನ್ನೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಪುತ್ತೂರು ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ॥ ಎ. ಹೇಮಾವತಿ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಕಾವು ವಲಯದ ಬಡಗನ್ನೂರು ಕಾರ್ಯಕ್ಷೇತ್ರದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳು ಬಡಗನ್ನೂರು ‘ಎ’ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಸೆ. 20 ರಂದು ಪೂರ್ವಾಹ್ನ ಗಂ 8.30 ಕ್ಕೆ ಬಡಗನ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.


ಭಜನಾ ಕಾರ್ಯಕ್ರಮ
ಬೆಳಿಗ್ಗೆ ಗಂ 8.30 ರಿಂದ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮವು ನಡೆಯಲಿದೆ.



ಪದಗ್ರಹಣ ಸಮಾರಂಭ
ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ನಾರಾಯಣ ಭಟ್ ಬೀರ್ನೊಡಿ ಉದ್ಘಾಟನೆ ಮಾಡಲಿದ್ದಾರೆ. ಸಮಾರಂಭವು ಬಡಗನ್ನೂರು ಎ ಒಕ್ಕೂಟ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶ್ರೀ. ಕ್ಷೇ.ಧ. ಗ್ರಾ. ಯೋಜನೆ ಬಿ. ಸಿ. ಟ್ರಸ್ಟ್ ರಿ ನ ಯೋಜನಾಧಿಕಾರಿ ಶಶಿಧರ್ ಎಂ, ಪುತ್ತೂರು ಕೇಂದ್ರ ಒಕ್ಕೂಟ ಅಧ್ಯಕ್ಷ ಉದಯ್ ಕುಮಾರ್,ಕಾವು ವಲಯ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ನಾರಾಯಣ ರೈ ಕುದ್ಮಾಡಿ , ಕಾವು ವಲಯ ವಲಯಾಧ್ಯಕ್ಷ ದಿನೇಶ್ ರೈ ಕುತ್ಯಾಳ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಬಡಗನ್ನೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕುಮಾರ್ ಕೆ. ಜೆ, ಬಡಗನ್ನೂರು ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಗೀತಾ ಶೇಖರ್, ಕಾವು ವಲಯ ಜನಜಾಗೃತಿ ವೇದಿಕೆ ಸದಸ್ಯ ಸಂತೋಷ್ ಆಳ್ವ ಭಾಗವಹಿಸಲಿದ್ದಾರೆ.









