






ಪುತ್ತೂರು: ಕುಂಬ್ರ ಶ್ರೀರಾಮಗಿರಿಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ಕನ್ಯಾ ಸಂಕ್ರಮಣದ ಅಂಗವಾಗಿ ಸೆ.17ರಂದು ಮಧ್ಯಾಹ್ನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು.


ಅರ್ಚಕರಾದ ಪ್ರಕಾಶ್ ನಕ್ಷತ್ರಿತ್ತಾಯರವರ ನೇತೃತ್ವದಲ್ಲಿ ನಡೆದ ಪೂಜೆಯು ಮಧ್ಯಾಹ್ನ ಮಹಾಮಂಗಳಾರತಿ, ಮಹಾಪೂಜೆಯೊಂದಿಗೆ ಭಕ್ತಾಧಿಗಳಿಗೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರತನ್ ರೈ ಕುಂಬ್ರ, ಪ್ರಧಾನ ಕಾರ್ಯದರ್ಶಿ ರಾಜ್‌ಪ್ರಕಾಶ್ ರೈ ಕುಂಬ್ರ, ಕೋಶಾಧಿಕಾರಿ ಅಂಕಿತ್ ರೈ ಕುಯ್ಯಾರು, ಉಪಾಧ್ಯಕ್ಷರುಗಳಾದ ಜಗನ್ನಾಥ ಪೂಜಾರಿ ಮುಡಾಲ, ಸದಾಶಿವ ನಾಯ್ಕ ಶೇಖಮಲೆ, ಜತೆ ಕಾರ್ಯದರ್ಶಿ ಉದಯ ಮಡಿವಾಳ, ಶ್ರೀ ಗಣೇಶೋತ್ಸವ ಸಮಿತಿ ಸಂಚಾಲಕ ಹರೀಶ್ ರೈ ಮುಗೇರು ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು ಸದಸ್ಯರುಗಳು ಉಪಸ್ಥಿತರಿದ್ದರು.



ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಸೇವೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ನೆಟ್ಟಣಿಗೆ ಮಾಡ್ನೂರು ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಸೇವೆ ಸಲ್ಲಿಸಲಾಯಿತು. ನೆಟ್ಟಣಿಗೆ ಮಾಡ್ನೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಪದಾಧಿಕಾರಿಗಳು ಪ್ರಧಾನಿಯವರ ಹೆಸರಿನಲ್ಲಿ ಸೇವಾ ಚೀಟಿ ಬರೆಯಿಸುವ ಮೂಲಕ ಅರ್ಚನೆ ಸಲ್ಲಿಸಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಲಭಿಸಲಿ ಹಾಗೂ ದೇಶಕ್ಕೆ ಇನ್ನಷ್ಟು ಸೇವೆ ಸಲ್ಲಿಸುವ ಭಾಗ್ಯ ಮತ್ತು ಮತ್ತೊಮ್ಮೆ ಪ್ರಧಾನಿಯಾಗುವ ಸೌಭಾಗ್ಯವನ್ನು ಭಗವಂತ ಕರುಣಿಸಲಿ ಎಂದು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷರು ಹಾಗೂ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ, , ರೈತ ಮೋರ್ಚಾದ ಉಪಾಧ್ಯಕ್ಷ ಹರೀಶ್ ಜಾರತ್ತಾರು, ಶಕ್ತಿಕೇಂದ್ರದ ಅಧ್ಯಕ್ಷ ಶರತ್ ರೈ ದೇರ್ಲ ಮತ್ತು ಯುವರಾಜ್ ಪೂಂಜಾ, ಬೂತ್ ಅಧ್ಯಕ್ಷರಾದ ನೇಮಿರಾಜ್ ರೈ, ಅರುಣ್ ರೈ ಬಿಜಲ, ಗ್ರಾ ಪಂ. ಮಾಜಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು,ಮುಖಂಡರಾದ ಉಷಾ ನಾರಾಯಣ ಗೌಡ, ರಾಮಯ್ಯ ಗೌಡ, ಶಿವರಾಮ ಗೌಡ, ಪುರಂದರ ಶೆಟ್ಟಿ, ಸುಷ್ಮಾ ಸತೀಶ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.










