ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ರಾಮಕುಂಜದಲ್ಲಿ ತುಳು ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ

0

ರಾಮಕುಂಜ: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯ ಪ್ರೌಢಶಾಲೆಯಲ್ಲಿನ ತುಳು ವಿದ್ಯಾರ್ಥಿಗಳು ಸೆ.19ರಂದು ಸಂಭ್ರಮಾಚರಣೆ ನಡೆಸಿದರು.


ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಯಿಲ ಶಾಖಾ ಕಟ್ಟಡ ಬಳಿಯಿಂದ ಬ್ಯಾಂಡ್ ವಾದ್ಯಗಳೊಂದಿಗೆ ಶಾಲೆಯ ತನಕ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಮಾತನಾಡಿ, ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವುದನ್ನು ನಾವು ಗೌರವದಿಂದ ಸ್ವಾಗತಿಸುತ್ತೇವೆ. ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಹಲವು ವರ್ಷಗಳಿಂದ ಸರಕಾರಕ್ಕೆ ಮನವಿ, ಒತ್ತಡ ತರಲಾಗುತ್ತಿತ್ತು. ಇದೀಗ ರಾಜ್ಯ ಸರಕಾರ ದಿಟ್ಟ ತೀರ್ಮಾನ ಕೈಗೊಂಡಿರುವುದು ತುಳುವರು ಸಂಭ್ರಮ ಪಡುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಗೆ ಹಾಗೂ ಸರಕಾರಕ್ಕೆ ಕ್ಲಪ್ತ ಸಮಯದಲ್ಲಿ ವರದಿ ಸಲ್ಲಿಸಿದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಮೋಹನ್ ಆಳ್ವರವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅನಂದ್ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ತುಳು ಶಿಕ್ಷಕಿ ಸರಿತಾ ಜನಾರ್ದನ್ ಹಾಗೂ ಇತರೇ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here