







ಉಪ್ಪಿನಂಗಡಿ: ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಇನ್ನೋರ್ವ ವಿದ್ಯಾರ್ಥಿನಿ ಸ್ಫೂರ್ತಿ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.


ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದಲ್ಲಿ ಏಳನೇ ತರಗತಿಯ ಸ್ಫೂರ್ತಿ ಹಾಗೂ ಪೂರ್ವಿ ಎಸ್.ಎಂ. ಅವರು ಸ್ಪರ್ಧಿಸಿದ್ದರು. ಅವರಲ್ಲಿ ಪೂರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರಾಥಮಿಕ ಶಾಲಾ ಮುಖ್ಯಗುರು ಎ. ಲಕ್ಷ್ಮಣ ಗೌಡರ ನೇತೃತ್ವದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಭಾಶ್ಚಂದ್ರ ಕೆ. ತರಬೇತಿ ನೀಡಿದ್ದಾರೆ.













