







ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.20ರಂದು ದಕ್ಷಿಣ ಕನ್ನಡ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ನಡೆದ ಅಂತರ್‌ಜಿಲ್ಲಾ ಮಾಸ್ಟರ್ಸ್ & ಕಿಡ್ಸ್ ಅಥ್ಲೆಟಿಕ್ ಮೀಟ್–2026 ಕ್ರೀಡಾಕೂಟದಲ್ಲಿ ಉಸ್ಮಾನ್ ಬಿ. ಅವರು 100 ಮೀಟರ್ ಓಟ ಮತ್ತು ಲಾಂಗ್ ಜಂಪ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಉಸ್ಮಾನ್ ಬಿ. ಅವರು ಪ್ರಿಯಾ ಉಬಾರ್ ಕ್ರಿಕೆಟ್ ತಂಡದ ಸ್ಥಾಪಕ ಸದಸ್ಯರಾಗಿದ್ದು ಪ್ರಿಯಾ ಉಬಾರ್ ಲೆಜೆಂಡ್ ತಂಡದ ನಾಯಕರಾಗಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೂಲತಃ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರ ನಿವಾಸಿಯಾಗಿರುವ ಇವರು ಪ್ರಸ್ತುತ ಬಂಟ್ವಾಳ ತಾಲೂಕಿನ ಸತ್ತಿಕಲ್ಲು ನಿವಾಸಿಯಾಗಿದ್ದಾರೆ. ತಮ್ಮ ವೃತ್ತಿಜೀವನದ ಜವಾಬ್ದಾರಿಗಳೊಂದಿಗೆ ಕ್ರೀಡಾ ಕ್ಷೇತ್ರದಲ್ಲಿಯೂ ಇವರು ಹಲವು ಬಾರಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.













