ಸುದ್ದಿ ಬಿಡುಗಡೆ ಪತ್ರಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರಿಂದ ಶ್ಲಾಘನೆ

0

ಪುತ್ತೂರು: ಪತ್ರಿಕಾ ಮಾಧ್ಯಮ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡುತ್ತಿರುವ ಪುತ್ತೂರಿನ ಸುದ್ದಿ ಬಿಡುಗಡೆ ದಿನಪತ್ರಿಕೆಯ ಬಗ್ಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಸೆ. 19 ರಂದು ಜರಗಿದ ಖಾಸಗಿ ಕಾರ್‍ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೀರಪ್ಪ ಮೊಯಿಲಿ ಅವರು ಪುತ್ತೂರು ಸುದ್ದಿ ಬಿಡುಗಡೆ ದಿನಪತ್ರಿಕೆಯನ್ನು ಓದಿ, ಸ್ಥಳೀಯ ಸುದ್ದಿಗಳನ್ನು ನೈಜವಾಗಿ ನೀಡುವ ಮೂಲಕ ಸುದ್ದಿ ಪತ್ರಿಕೆಯು ದ,ಕ, ಜಿಲ್ಲಾ ಮಟ್ಟದಲ್ಲಿ ಒಳ್ಳೆಯ ಹೆಸರನ್ನು ಮಾಡಿದೆ ಎಂದು ಪ್ರಶಂಶೆ ವ್ಯಕ್ತಪಡಿಸಿದರು. ಆರ್‌ಬಿಐ ಉತ್ತರ ವಲಯದ ಮಾಜಿ ನಿರ್ದೇಶಕ ಡಾ. ಅಗರಿ ನವೀನ್ ಭಂಡಾರಿ, ಸುದ್ದಿ ಬಿಡುಗಡೆ ವರದಿಗಾರ ಉಮಾಪ್ರಸಾದ್ ರೈ ನಡುಬೈಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here