ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕಗೆ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ

0

ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.20ರಂದು ನಡೆದ ಅಂತರ್ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.

50+ ವಯೋಮಾನದ ವಿಭಾಗದಲ್ಲಿ 5 ಕಿ.ಮೀ. ವೇಗದ ನಡಿಗೆ ಹಾಗೂ ಜಾವೆಲಿನ್ ಎಸೆತದಲ್ಲಿ ಚಿನ್ನ ಮತ್ತು ಹೈಜಂಪ್‌ನಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ಇವರು ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿದ್ದು, ಕಳೆದ ಐದಾರು ವರ್ಷಗಳಿಂದ ಮಾಸ್ಟರ್ಸ್ ಅಥ್ಲೆಟಿಕ್ಸ್ ಹಾಗೂ ಮ್ಯಾರಥಾನ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here