







ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿ ಉತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಕೃಷ್ಣ ಉಪಾಧ್ಯಾಯ ಮತ್ತು ಸಾಮಾಜಿಕ ಕಾರ್ಯಕರ್ತ ಆರ್ ಸಿ ನಾರಾಯಣ್ ಅವರು ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.




ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿ ಉತ್ಸವವನ್ನು ಭಕ್ತಿಭಾವ ಹಾಗೂ ವೈಭವದಿಂದ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಉತ್ಸವದ ಅಂಗವಾಗಿ ನವರಾತ್ರಿಯ ಎಲ್ಲಾ ದಿನವೂ ಭಜನೆ, ದುರ್ಗಾ ಪೂಜೆ, ರಂಗ ಪೂಜೆ , ಅನ್ನದಾನ ನಡೆಯಲಿದ್ದು, ವಿಜಯದಶಮಿಯಂದು ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾ ಹವನದೊಂದಿಗೆ ನವರಾತ್ರಿ ಸಂಪನ್ನಗೊಳ್ಳಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ,ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಕ್ಷೇತ್ರದ ವತಿಯಿಂದ ಮನವಿ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಂ ಶರ್ಮ, ಕ್ಷೇತ್ರ ಸಂವರ್ಧನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.










