







ಪುತ್ತೂರು: ಪ್ರೇರಣಾದಾಯಕ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ನಿವೃತ್ತ ಚಿತ್ರಕಲಾ ಅಧ್ಯಾಪಕ ಗೋಪಾಲಕೃಷ್ಣ ರಾವ್ ಅವರು ಕರ್ನಾಟಕ ಪ್ರೆಸ್ ಕ್ಲಬ್ನ ‘ಗುರು ಚೈತನ್ಯ’ ಪ್ರಶಸ್ತಿ ಸ್ವೀಕರಿಸಿದ್ದಾರೆ.


ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸ್ಮರಣಾರ್ಥ ಸೆ.20ರಂದು ಬೆಂಗಳೂರಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.













