






ಪುತ್ತೂರು: ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಸುದಾನ ಶಾಲೆಯ ಕ್ರಿಕೆಟ್ ತಂಡಗಳು ಸಾಧನೆ ಮಾಡಿವೆ. 17ರ ವಯೋಮಾನದ ಹಾಗೂ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸುದಾನ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.


ವಿಜೇತ ತಂಡವನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್, ಆಡಳಿತಾಧಿಕಾರಿ ಸುಶಾಂತ್ ಹಾರ್ವಿನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪರಾಜ್, ಲೀಲಾವತಿ ಮತ್ತು ಜೀವಿತ ಎನ್.ಕೆ ಅಭಿನಂದಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸುದಾನ ಕ್ರಿಕೆಟ್ ಅಕಾಡೆಮಿಯ ಕಿರಣ್ ಕುಮಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕಡಬ ತರಬೇತಿ ನೀಡಿದ್ದಾರೆ.













