







ಪುತ್ತೂರು: ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಮಾಜಿ ಸಚಿವರು, ಕಾಂಗ್ರೆಸ್ನ ಹಿರಿಯ ಮುಖಂಡರಾಗಿರುವ ಬಿರಮಾನಾಥ ರೈಯವರ ಆರೋಗ್ಯವೃದ್ಧಿಗಾಗಿ ಶಾಸಕರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಅಳ್ವ ಅವರ ನೇತೃತ್ವದಲ್ಲಿ ಸೆ.21ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿದರು.


ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ಬನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ರೋಷನ್ ರೈ ಬನ್ನೂರು, ಸನತ್, ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಭಂಡಾರಿ ಕೈಪ, ವಿಕ್ರಂ ರೈ ಅಂತರ, ಸಂತೋಷ್ ರೈ ಕೆದಿಕಂಡೆಗುತ್ತು, ಗಣೇಶ್ ಶೆಟ್ಟಿ ಬಿಳಿಯೂರು, ರಾಜೇಶ್ ಶೆಟ್ಟಿ ಮಠಂತಬೆಟ್ಟು, ಸುದೇಶ್ ಕುಮಾರ್ ಪುತ್ತೂರು ಸಹಿತ ಹಲವು ಮಂದಿ ಉಪಸ್ಥಿತಿರಿದ್ದರು.













