







ಬಡಗನ್ನೂರು : ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಹಾಗೂ ಕನಕದಾಸ ಅಧ್ಯಯನ ಪೀಠ, ಮಂಗಳೂರು ವಿಶ್ವ ವಿದ್ಯಾನಿಲಯ ಮಂಗಳ ಗಂಗೋತ್ರಿ ಸಂಯುಕ್ತ ಆಶ್ರಯದಲ್ಲಿ ರಾಮಧಾನ್ಯ ಚರಿತೆ ಗಮಕ ಕಾರ್ಯಕ್ರಮವು ಸೆ.21 ರಂದು ಪಟ್ಟೆ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಗೋಪಾಲಕೃಷ್ಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಕನಕದಾಸ ಅಧ್ಯಯನ ಪೀಠದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಮಾತನಾಡಿ, ಹಿರಿಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನವು ಪಾವನವಾಗುತ್ತದೆ. ಭಕ್ತಿಯಿಂದ ದೇವರನ್ನು ಬೇಡಿದಾಗ ನಮ್ಮ ಅಹಂಕಾರವನ್ನು ಕರಗಿಸಿಕೊಳ್ಳಬಹುದು. ಒಟ್ಟಾಗಿ ಸಮಾನತೆಯಿಂದ ಬಾಳಬೇಕೆಂದು ಕನಕದಾಸರ ಆಶಯ” ಎಂದು ಹೇಳಿದರು.



ಪಟ್ಟೆ ವಿದ್ಯಾ ಸಂಸ್ಥೆಗಳ ನಿರ್ದೇಶಕರು, ನಿವೃತ್ತ ಪ್ರಾಚಾರ್ಯರು, ಕಲಾವಿದರು ಆದ ಗಣರಾಜ ಕುಂಬ್ಳೆ ಗಮಕ ವ್ಯಾಖ್ಯಾನವನ್ನು ಮಾಡಿದರು. ಮೂಡಬಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀರಾಮ ಪ್ರಸಾದ್ ಕಾಂಚೋಡು ಗಮಕ ವಾಚಕರಾಗಿ ಭಾಗವಹಿಸಿದ್ದರು.ವೇದಿಕೆಯಲ್ಲಿ ಪಟ್ಟೆ ವಿದ್ಯಾಸಂಸ್ಥೆಗಳ ನಿರ್ದೇಶಕ ಜಿ,ಪರಮೇಶ್ವರ್ ಭಟ್, ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ, ಪ್ರೌಢ ಶಾಲಾಮುಖ್ಯಗುರು ಸುಮನಾ ಬಿ, ಪ್ರಾಥಮಿಕ ಶಾಲಾ ಮುಖ್ಯಗುರು ರಾಜಗೋಪಾಲ್ ಎನ್, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನಕದಾಸ ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಸಿಬ್ಬಂದಿಗಳಾದ ಕಿರಣ್,ಸರಿತಾ ವಿದ್ಯಾರ್ಥಿಗಳಾದ ಕುಮಾರಿ ಸ್ನೇಹ ಮತ್ತು ನೇತ್ರಾವತಿ, ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯಗುರು ರಾಜಗೋಪಾಲ್ ಎನ್, ಸ್ವಾಗತಿಸಿ, ಪ್ರೌಢಶಾಲಾ ಸಹ ಶಿಕ್ಷಕ ವಿಶ್ವನಾಥ ಬೊಳ್ಳಾಡಿ ವಂದಿಸಿದರು . ಶಿಕ್ಷಕಿ ಜ್ಯೋತಿ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.










