







ನೆಲ್ಯಾಡಿ: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ.24ರಂದು ಬೆಳಗ್ಗೆ 10.30ಕ್ಕೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೇಶವ ಗೌಡ ಅಲೆಕ್ಕಿ ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ.


ಸಭೆಗೆ ಅತಿಥಿಗಳಾಗಿ ಒಕ್ಕೂಟದ ಅಧಿಕಾರಿಗಳು ಆಗಮಿಸಲಿದ್ದು ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಪ್ರವೀಣ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













