







ಪುತ್ತೂರು: ಉಡುಪಿ ಜಿಲ್ಲೆಯ ಕೋಟದ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ,ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಜನ್ಮ ಭೂಮಿ ಟ್ರಸ್ಟ್ ಸಹಯೋಗದಲ್ಲಿ ನೀಡುವ 2026ನೇ ಸಾಲಿನ ಡಾ.ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆ ಕಾಮಜಲು ಇಲ್ಲಿನ ಶಿಕ್ಷಕಿ ಸುಧಾ ಕುಮಾರಿ ಅವರು ಆಯ್ಕೆಯಾಗಿರುತ್ತಾರೆ.
ಸೆಪ್ಟೆಂಬರ್ 26ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.















