ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ – ಕೇರಳ ಮೂಲದ ಬಾಲಕನ ವಿರುದ್ಧ‌‌ ಫೋಕ್ಸೊ ಕಾಯ್ದೆಯಡಿ ಪ್ರಕರಣ‌‌ ದಾಖಲು

0

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬನ ವಿರುದ್ದ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಅಪ್ರಾಪ್ತ ಬಾಲಕಿಯನ್ನು ಮೊಬೈಲ್ ಮೂಲಕ ಪರಿಚಯಿಸಿಕೊಂಡು, ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪಿಸಲಾಗಿದೆ. 2025ರ ಡಿಸೆಂಬರ್ 21ರಂದು ಘಟನೆ ನಡೆದಿದ್ದು, ಬಳಿಕ ಸೆ. 8ರಂದು ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸೆ. 9ರಂದು ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ.


ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಸಂಬಂಧಿಸಿದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here