







ಪುತ್ತೂರು: ಗ್ರಾಮೀಣಾಭಿವೃದ್ದಿ ಇಲಾಖೆ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ 2 ಕೋಟಿ ರೂ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.


ಗುರುವಾರ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ರಸ್ತೆಗಳ ಅಬಿವೃದ್ದಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 2 ಕೋಟಿ ರೂಗಳನ್ನು ಸಿ ಎಂ ಅವರು ಮಂಜೂರುಗೊಳಿಸಿ ಆದೇಶಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಬಹುತೇಕ ರಸ್ತೆಗಳು ಇನ್ನೂ ಅಭಿವೃದ್ದಿ ಕಾಣದೇ ಇದ್ದು ಗ್ರಾಮೀಣ ಭಾಗದಿಂದ ರಸ್ತೆ ಅಭಿವೃದ್ದಿ ಬೇಡಿಕೆಗೆ ಹೆಚ್ಚು ಮನವಿ ಬರುತ್ತಿರುವುದರಿಂದ ಶಾಸಕರು ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು.



ಗ್ರಾಮೀಣಾಭಿವೃದ್ದಿ ಇಲಾಖೆಯ ಮೂಲಕ ಮುಖ್ಯಮಂತ್ರಿಗಳು 2 ಕೋಟಿ ರೂ ವಿಶೇಷ ಅನುದಾನವನ್ನು ನೀಡಿದ್ದಾರೆ. ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಈ ಅನುದಾನವನ್ನು ಹಂಚಿಕೆ ಮಾಡಲಿದ್ದೇನೆ. ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ದಿಗಬೇಕು ಎಂಬ ಉದ್ದೇಶದಿಂದ ಈ ಅನುದಾನಕ್ಕೆ ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು
ಅಶೋಕ್ ರೈ, ಶಾಸಕರು ಪುತ್ತೂರು










