







ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಎನ್‌ಸಿಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ 19 ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ, ನಿರಂತರ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಸವಾಲುಗಳಿಗೆ ಹೆದರದೆ ಕನಸುಗಳನ್ನು ನನಸಾಗಿಸಲು ಕಠಿಣ ಪರಿಶ್ರಮ ಮಾಡಬೇಕು. ಕಾರ್ಯವನ್ನು ಮಧ್ಯದಲ್ಲಿ ಕೈಬಿಡದೆ ಯಶಸ್ಸಿನತ್ತ ಸಾಗಬೇಕು. ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.




ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸೈನಿಕ ಶಿಬಿರದಲ್ಲಿ ಯಶಸ್ವಿಯಾಗಿ ಭಾಗವಹಿಸಿದ ಜೂನಿಯರ್ ಅಂಡರ್ ಆಫೀಸರ್ ಅಕ್ಷತಾ ಎ. ಅವರನ್ನು ಸನ್ಮಾನಿಸಲಾಯಿತು.
ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಉಪಸ್ಥಿತರಿದ್ದರು. ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮ ಭಟ್ ಸ್ವಾಗತಿಸಿ, ನಿರೂಪಿಸಿದರು.










