ಬೆಳಂದೂರು ಸ.ಪ್ರ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

0

ಕಾಣಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಸೆ 24ರಂದು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಅಧಿಕಾರಿಯಾದ ಹರೀಶ್ ಕುಮಾರ ಎನ್ ,ರಾಷ್ಟ್ರೀಯ ಸೇವಾ ಯೋಜನೆಯು ಹೇಗೆ ನಮ್ಮಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸುತ್ತದೆ. ಮತ್ತೆ ವಿದ್ಯಾರ್ಥಿಗಳಿಗೆ ಹೇಗೆ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ ಎಂಬುದರ ಬಗ್ಗೆ ಮಾತನಾಡಿದರು.



ಕಾಲೇಜಿನ ಐ ಕ್ಯು ಎ ಸಿ ಸಂಚಾಲಕ ಮಹೇಶ್ ಬಿ ಎಸ್ ರವರು ರಾಷ್ಟ್ರೀಯ ಸೇವಾ ಯೋಜನೆ ಗೀತೆಯ ಮಹತ್ವವನ್ನು ಮಕ್ಕಳಿಗೆ ತಿಳಿಹೇಳಿದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here