ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ವಂದೇ ಮಾತರಂ” 150ನೇ ವರ್ಷಾಚರಣೆ ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನ, ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ, ಹಾಗೂ ವಿದ್ಯಾಭಾರತಿ ಕರ್ನಾಟಕದ ಆಶ್ರಯದಲ್ಲಿ “ವಂದೇ ಮಾತರಂ” 150ನೇ ವರ್ಷಾಚರಣೆಯ ಪ್ರಯುಕ್ತ ವಿಶೇಷ ದೇಶಭಕ್ತಿ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


“ದೇಶಭಕ್ತಿ ಗೀತೆಯೊಂದಿಗೆ ಒಂದಾಗೋಣ-ಹೆಮ್ಮೆಯಿಂದ ಹಾಡೋಣ- ನಮಾಮಿ ಭಾರತಂ” ಎಂಬ ಆಶಯದೊಂದಿಗೆ ನಡೆದ ಈ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಈಶ್ವರಚಂದ್ರ ಹಾಗೂ ಪಡ್ಡಾಯೂರು ಸಹಕಾರಿ ಹಾಲು ಉತ್ಪಾದಕ ಸಂಘದ ಅಧ್ಯಕ್ಷರಾದ ಶ್ರೀ ಆನಂದ ಗೌಡರವರು, ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಟ್ಟಾಗಿ “ವಂದೇ ಮಾತರಂ” ಗೀತೆಯನ್ನು ಹಾಡುವ ಮೂಲಕ, ವಂದೇ ಮಾತರಂ ಗೀತೆಯ 150 ವರ್ಷಗಳ ಐತಿಹಾಸಿಕ ಪಯಣವನ್ನು ಸ್ಮರಿಸಿ ದೇಶ ಪ್ರೇಮದ ಸಂದೇಶ ಸಾರಿದರು

LEAVE A REPLY

Please enter your comment!
Please enter your name here