







ನೆಲ್ಯಾಡಿ: ನೆಲ್ಯಾಡಿ ಬಸ್ ನಿಲ್ದಾಣಕ್ಕೆ ಎಕ್ಸ್ಪ್ರೆಸ್ ಮತ್ತು ಸರ್ವಿಸ್ ಬಸ್ಗಳು ಪ್ರವೇಶಿಸಿ ಸೇವೆ ನೀಡಬೇಕು ಎಂದು ಆಗ್ರಹಿಸಿ ಎಸ್.ಡಿ.ಪಿ.ಐ ನೆಲ್ಯಾಡಿ ಗ್ರಾಮ ಸಮಿತಿ ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ಕೆಲವು ಎಕ್ಸ್ಪ್ರೆಸ್ ಬಸ್ಗಳು ಸರ್ವಿಸ್ ರಸ್ತೆಗೆ ಬಾರದೆ ಓವರ್ಬ್ರಿಡ್ಜ್ ಮೂಲಕ ನೇರ ಸಂಚರಿಸುತ್ತಿರುವುದರಿಂದ ಬಸ್ ನಿಲ್ದಾಣಕ್ಕೆ ಬರುತ್ತಿಲ್ಲ. ಇದರಿಂದ ಪ್ರಯಾಣಿಕರು ಸರ್ವಿಸ್ ರಸ್ತೆ ಬದಿ ನಿಂತು ಕಾಯಬೇಕಾಗಿದೆ. ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಬಳಸುವಂತೆ ಎಕ್ಸ್ಪ್ರೆಸ್ ಬಸ್ಗಳು ಸರ್ವಿಸ್ ರಸ್ತೆ ಮೂಲಕ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು, ಸ್ಥಳ ಪರಿಶೀಲನೆ ನಡೆಸಿ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.



ಎಸ್.ಡಿ.ಪಿ.ಐ ಕಡಬ-ಉಪ್ಪಿನಂಗಡಿ ಬ್ಲಾಕ್ ಕಾರ್ಯದರ್ಶಿ ಸಿದ್ದೀಕ್ ಎನ್, ನೆಲ್ಯಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಸಿದ್ದೀಕ್ ಎಂ, ಸದಸ್ಯರಾದ ಹನೀಫ್ ಬೈಲು, ಮುಹಮ್ಮದ್ ರಫೀಕ್ ಅಪ್ಪಿ ಉಪಸ್ಥಿತರಿದ್ದರು.










