







ಪುತ್ತೂರು: ಇದ್ದಿಲು ಸಾಗಾಟ ಮಾಡುತ್ತಿದ್ದ ಲಾರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಹಾನಿಗೊಂಡ ಘಟನೆ ಸೆ.26ರ ರಾತ್ರಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಎಂಬಲ್ಲಿ ನಡೆದಿದೆ.



ಲಾರಿಯಲ್ಲಿ ಇದ್ದಿಲು ಸಾಗಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಗೆ ಲಾರಿಯನ್ನು ಆವರಿಸಿತು. ಘಟನೆಯಿಂದ ಲಾರಿ ಬಹುತೇಕ ಸಂಪೂರ್ಣವಾಗಿ ಸುಟ್ಟು ಹಾನಿಗೊಂಡಿದೆ.




ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.










