







ಲಾಭದ ಒಂದಂಶವನ್ನು ಸಮಾಜಕ್ಕೆ ಸಮರ್ಪಣೆ ಮಾಡುವ ಯೋಚನೆ ಅಭಿನಂದನೀಯ: ಯದುರಾಜ್ ಡಿ.ಕೆ.


ಪುತ್ತೂರು: ಸಂಸ್ಥೆಯ ವ್ಯವಹಾರದಲ್ಲಿ ಬಂದ ಲಾಭದ ಒಂದಂಶವನ್ನು ಸಮಾಜಕ್ಕೆ ಸಮರ್ಪಣೆ ಮಾಡುವ ಸಂಸ್ಥೆಯ ಯೋಚನೆ ಅಭಿನಂದನೀಯ. ಇವರ ಈ ಯೋಚನೆಯಿಂದ ಸರಕಾರಿ ಶಾಲೆಗಳಲ್ಲಿ ಕಲಿಯುವ ಬಡ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಲಭಿಸಲು ಸಹಕಾರಿಯಾಗಲಿದೆ. ಇನ್ನಷ್ಟು ಶಾಲೆಗಳಿಗೆ ಸಿ.ಎಸ್.ಆರ್. ಫಂಡ್ ನ ಮೂಲಕ ಸಹಕಾರಿಯಾಗಲಿ
ಎಂದು ಸರಕಾರಿ ಆಸ್ಪತ್ರೆಯ ವೈದ್ಯಾದಿಕಾರಿ ಯದುರಾಜ್ ಡಿ.ಕೆ. ರವರು ಹೇಳಿದರು.



ಅವರು ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಂತರಾಷ್ಟ್ರೀಯ ಖ್ಯಾತಿಯ ಚಿನ್ನಾಭರಣ ಮಳಿಗೆ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಯ ಸಿ.ಎಸ್.ಆರ್. ನಿಧಿಯಿಂದ ಸರಕಾರಿ ಶಾಲೆಗಳಿಗೆ ಅಗತ್ಯ ಸಾಮಾಗ್ರಿ ಖರೀದಿಗಾಗಿ ನೀಡಲಾಗುವ ಚೆಕ್ ಹಸ್ತಾಂತರ ಮಾಡಿ ಮಾತನಾಡಿದರು.
ಸಾಲ್ಮರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯಿನಿ ಭಾರತಿ,ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ, ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯಿನಿ ರಮ್ಯ, ಕುಂತೂರುಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಾಯತ್ರಿ, ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯಿನಿ ಜಾನಕಿ ಪಿ.ಆರ್., ಸಂಸ್ಥೆಯ ಏರಿಯಾ ಮ್ಯಾನೇಜರ್ ಅಗಸ್ಟಿನ್, ಪುತ್ತೂರು ಶಾಖಾ ವ್ಯವಸ್ಥಾಪಕ ಹರಿ ಮಾರಾರ್, ಸಹಾಯಕ ವ್ಯವಸ್ಥಾಪಕ ಪ್ರಜೀಶ್ ಪ್ರಕಾಶ್, ಅಕೌಂಟೆಂಟ್ ಇನೋಶ್ ಸನ್ನಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಸಿಂಚನ, ಮೋಕ್ಷಿತಾ, ಚೈತ್ರ ಪ್ರಾರ್ಥಿಸಿದರು. ಸಿಬ್ಬಂದಿ ಉದಯ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಿಬ್ಬಂದಿ ಅಶ್ವಿನಿ ವಂದಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲ್ಮರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಬೆತ್ತಡ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಬ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಂದೂರು ಶಾಲೆಗಳಿಗೆ ಒಟ್ಟು 3,19,957 ರೂಪಾಯಿಯ ಚಿಕ್ ಅನ್ನು ವಿತರಣೆ ಮಾಡಲಾಯಿತು.










