







ಪುತ್ತೂರು: ಸೆಪ್ಟೆಂಬರ್ 28ರಿಂದ 30ರವರೆಗೆ ದೇಶಾದ್ಯಂತ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿ ಇಂದು ಸೇರಿದಂತೆ ಮೂರು ದಿನ ಬ್ಯಾಂಕ್ ಸೇವೆಗಳು ಎಂದಿನಂತೆ ಲಭ್ಯವಿರಲಿವೆ ಎಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ತಿಳಿಸಿದೆ.


ಸೆ.27ರ ರಾತ್ರಿ 9.30ಕ್ಕೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಮತ್ತು ಯುಎಫ್ಬಿಯು ನಡುವೆ ನಡೆದ ಮಾತುಕತೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. 5 ದಿನಗಳ ಬ್ಯಾಂಕಿಂಗ್ ವಾರ (ಎಲ್ಲಾ ಶನಿವಾರಗಳಂದು ರಜೆ) ಬೇಡಿಕೆ ಕುರಿತು ಚರ್ಚಿಸಲು ಐಬಿಎ-ಯುಎಫ್ಬಿಯು ಉನ್ನತ ಮಟ್ಟದ ಸಮಿತಿ ರಚಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಯುಎಫ್ಬಿಯು ಪ್ರಕಟಣೆಯಲ್ಲಿ ತಿಳಿಸಿದೆ.



ಮುಷ್ಕರ ಮುಂದೂಡಿಕೆಯಾಗಿರುವುದರಿಂದ ಎಸ್ಬಿಐ ಸೇರಿದಂತೆ ಎಲ್ಲಾ ಬ್ಯಾಂಕ್ಗಳ ಶಾಖೆಗಳು ಮತ್ತು ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಎಸ್ಬಿಐ ತಡರಾತ್ರಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.










