







ಪುತ್ತೂರು: ಜಿಲ್ಲೆ ಹಾಗೂ ಪುತ್ತೂರು ತಾಲೂಕಿನ ಯುವಕ-ಯುವತಿ ಮಂಡಲಗಳು ಮತ್ತು ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ‘ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ’ ಸಂಘಟನೆಯು ‘ಮಜ್ಜಾರಡ್ಕ ವಿಷ್ಣು ಯುವ ಸಿರಿ ಪ್ರಶಸ್ತಿ 2026’ ಗೌರವಕ್ಕೆ ಅರ್ಜಿ ಆಹ್ವಾನಿಸಿದೆ.


ನಿರಂತರವಾಗಿ ಸಾಮಾಜಿಕ ಹಾಗೂ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಘಟನೆಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ನವೆಂಬರ್ 1 ರಂದು ನಡೆಯಲಿರುವ 9 ನೇ ವರ್ಷದ ‘ಕೆಸರ್ ಡೊಂಜಿ ಸಮಾರೋಪ ಸಮಾರಂಭ’ದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.



ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಜಿಲ್ಲೆ ಹಾಗೂ ತಾಲೂಕಿನ ಅರ್ಹ ಯುವಕ-ಯುವತಿ ಮಂಡಲಗಳು ಹಾಗೂ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರು ಹಾಗೂ ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕದ ಸಂಘಟನಾ ಕಾರ್ಯದರ್ಶಿಯಾಗಿರುವ ರಾಜೇಶ್ ಕೆ. ಮಯೂರ (ಮೊಬೈಲ್ ಸಂಖ್ಯೆ: 9483285830) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.










