







ಪುತ್ತೂರು: ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಪಾರಂಪರಿಕ ಜ್ಞಾನವನ್ನು ಉಳಿಸಿ ಬೆಳೆಸುವುದರ ಜೊತೆಗೆ, ಔಷಧ ಸಂಶೋಧನೆ, ಉತ್ಪಾದನೆ, ಉದ್ಯಮಶೀಲತೆ, ಸಾರ್ವಜನಿಕ ಸೇವೆ ಹಾಗೂ ಕಲೆ-ಸಂಸ್ಕೃತಿಯ ಪೋಷಣೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಪುತ್ತೂರಿನ ಜನಪ್ರಿಯ ಆಯುರ್ವೇದ ವೈದ್ಯ, ಉದ್ಯಮಿ ಹಾಗೂ ಕಲಾಪೋಷಕರಾಗಿರುವ ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್‌ನ ಆಡಳಿತ ನಿರ್ದೇಶಕ ಡಾ. ಹರಿಕೃಷ್ಣ ಪಾಣಾಜೆ ಅವರು ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ವತಿಯಿಂದ ನೀಡುವ ಪ್ರತಿಷ್ಠಿತ ‘ಆಯುರ್ಭೂಷಣ’ ಪ್ರಶಸ್ತಿ ಸ್ವೀಕರಿಸಿದರು.
ಬೆಂಗಳೂರಿನ ತಾಜ್ ಯಶವಂತಪುರದಲ್ಲಿ ಸೆ.26ರಂದು ನಡೆದ ಕಾರ್ಯಕ್ರಮದಲ್ಲಿ ಡಾ,ಹರಿಕೃಷ್ಣ ಪಾಣಾಜೆ ಹಾಗೂ ಅವರ ಪತ್ನಿ ರೂಪಲೇಖಾ ಅವರು ಪ್ರಶಸ್ತಿ ಸ್ವೀಕರಿಸಿದರು.
ಪಾವಗಡ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜಿ ಮಹಾರಾಜ್, ವಿಧಾನ ಪರಿಷತ್ ಸಭಾಪತಿ ಡಾ.ಉಮಾಶ್ರೀ, ವಿಧಾನ ಪರಿಷತ್ ಸದಸ್ಯ ಟಿ.ವಿ ಶರವಣ, ನಟ ನಿರ್ದೇಶಕ ಸುಚೇಂದ್ರಪ್ರಸಾದ್, ಖ್ಯಾತ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆ, ಪರ್ವ ಗ್ರೂಪ್ ಸಂಸ್ಥಾಪಕ ನೀಲೇಶ್ ಎಚ್.ಪಿ., ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್‌ನ ಸಮೂಹ ಸಂಪಾದಕೀಯ ನಿರ್ದೇಶಕರಾದ ರವಿ ಹೆಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.












