







ಉಪ್ಪಿನಂಗಡಿ: ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಉಪ್ಪಿನಂಗಡಿಯ ಕೃತಿ ಕೈಲಾರು ಅವರು ಬಿಬಿಎ ಎಲ್ಎಲ್ಬಿ ಪರೀಕ್ಷೆಯಲ್ಲಿ 5ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.


ಸೆ.26ರಂದು ನಡೆದ ಜೆಎನ್ಎನ್ ಕಾಲೇಜಿನ 18ನೇ ಪದವಿ ಪ್ರದಾನ ಸಮಾರಂಭದಲ್ಲಿ ಕೃತಿ ಕೈಲಾರು ಅವರನ್ನು ಗೌರವಿಸಿ, ಪದವಿ ಪ್ರದಾನ ಮಾಡಲಾಯಿತು. ಸುತ್ತೂರು ಶ್ರೀ ಜಗದ್ಗುರು ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರು ಪದವಿ ಪ್ರದಾನ ಮಾಡಿದರು. ಇವರು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದಲ್ಲಿ ಭರತ ನಾಟ್ಯದಲ್ಲಿ ಮಾಸ್ಟರ್ ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದಾರೆ.
ಕೃತಿ ಕೈಲಾರ್ ಅವರು ಉಪ್ಪಿನಂಗಡಿಯ ವಾಸ್ತು ಗಿಡ ಸನ್ನಿಧಿಯ ಕೈಲಾರು ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿ.













