ಜಿಲ್ಲಾ ಸಹಕಾರಿ ಯೂನಿಯನ್‌ನಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

0

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಸಹಕಾರ ಇಲಾಖೆ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ವಿಶೇಷ ತರಬೇತಿ ಕಾರ್ಯಾಗಾರ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ದ.ಕ.ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರು ಹಾಗೂ ಎಸ್.ಬಿ.ಜಯರಾಮ್ ರೈ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ತರಬೇತಿ ಆಯೋಜನೆ ಮಾಡಿರುವುದು ಹೈನುಗಾರರಿಗೆ ಸಹಕಾರಿಯಾಗಲಿದೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಇಂತಹ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಹೈನುಗಾರರಿಗೆ ಅನುಕೂಲವಾಗುವಂತೆ ಹಾಲಿನ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಿ ಎಂದರು.

ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಹಾಗೂ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ ಹೈನುಗಾರ ರೈತರ ಕಷ್ಟ ಸುಖಗಳು ಸಂಘದ ಕಾರ್ಯದರ್ಶಿಯವರಿಗೆ ತಿಳಿದಿರುತ್ತದೆ. ಹೈನುಗಾರರು ನಿಮ್ಮೊಂದಿಗೆ ವಿಚಾರ ವಿನಿಮಯ ಮಾಡುತ್ತಿರುತ್ತಾರೆ. ಈ ತರಬೇತಿಯಿಂದ ನಿಮ್ಮ ಕಾರ್ಯನಿರ್ವಹಣೆ ಉನ್ನತೀಕರಣಗೊಳಿಸಲು ಸಹಕಾರಿಯಾಗುತ್ತದೆ. ಪ್ರಸ್ತುತ ಸಹಕಾರ ಸಂಘದಲ್ಲೂ ಉತ್ತಮ ಉದ್ಯೋಗವಕಾಶಗಳಿವೆ. ಅತೀಹೆಚ್ಚು ವಿದ್ಯಾಭ್ಯಾಸ ಪಡೆದವರೂ ಸಹಕಾರ ರಂಗಕ್ಕೆ ಬರುತ್ತಿದ್ದಾರೆ. ನಿಮ್ಮ ಉದ್ಯೋಗವೂ ಸಣ್ಣದೆಂದು ಭಾವಿಸಬೇಡಿ ಅದು ದೊಡ್ಡ ಹುದ್ದೆಯಾಗಿದೆ. ಹೈನುಗಾರರಿಗೆ ಹಾಲಿನ ದರ 10 ರೂ. ಹೆಚ್ಚಳ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ ಎಂದು ಹೇಳಿ ತರಬೇತಿಯ ಪ್ರಯೋಜನ ಪಡೆಯಿರಿ ಎಂದರು.

ದ.ಕ.ಸಹಕಾರಿ ಹಾಲು ಉತ್ಪಾದಕರ ಉಕ್ಕೂಟದ ನಿರ್ದೇಶಕ ಚಂದ್ರಶೇಖರ ರಾವ್, ಜಗನ್ನಾಥ ಶೆಟ್ಟಿ, ವ್ಯವಸ್ಥಾಪಕರಾದ ಡಾ|ರವಿರಾಜ್ ಉಡುಪ, ಪುತ್ತೂರು ಟೌನ್ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖರ್ ಪಿ. ಶೆಟ್ಟಿ ಶುಭಹಾರೈಸಿದರು. ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಮಂಜುನಾಥ ಎನ್.ಎಸ್. ವಂದಿಸಿದರು.

ಸನ್ಮಾನ:
ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರನ್ನು ಸನ್ಮಾನಿಸಲಾಯಿತು.



ತರಬೇತಿ ಕಾರ್ಯಾಗಾರದಲ್ಲಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ಉಪವ್ಯವಸ್ಥಾಪಕ ಡಾ.ಸತೀಶ್ ರಾವ್ ಹಾಲಿನ ಗುಣಮಟ್ಟ, ರಾಸುಗಳ ನಿರ್ವಹಣೆ ಮತ್ತು ಒಕ್ಕೂಟದ ಯೋಜನೆಗಳು ಸೌಲಭ್ಯಗಳ ಬಗ್ಗೆ ತರಬೇತಿ ನೀಡಿದರು. ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಕೆ.ಎಸ್.ಬಾಲಸುಬ್ರಹ್ಮಣ್ಯ ಲೆಕ್ಕಪತ್ರಗಳ ನಿರ್ವಹಣೆ ಮತ್ತು ಲೆಕ್ಕಪರಿಶೋಧನೆ, ಮುಖ್ಯಕಾರ್ಯನಿರ್ವಾಹಕರ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ತರಬೇತಿ ನೀಡಿದರು.

LEAVE A REPLY

Please enter your comment!
Please enter your name here