ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

2

ಪುತ್ತೂರು: 2026-27ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಂಡಿರುವ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಆಧಾರ್ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ ಯೋಜನೆ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‌ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು ಪುತ್ತೂರು/ಕಡಬ ಮೊ:9686682251 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

2 COMMENTS

  1. ಸರ್ ನನಗೆ 2 ಕಾಲು ಇಲ್ಲ ಎದ್ದು ನಿಲ್ಲಲಿಕ್ಕೆ ಬರುವದಿಲ್ಲ ಅದಕ್ಕೆ ನಿಮ್ಮ ಹತ್ತಿರ Battery operated wheelchair ಕೇಳಿದೆ ಅಷ್ಟೇ ಸರ್

LEAVE A REPLY

Please enter your comment!
Please enter your name here