ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧ್ಯಾನೇಶ್ ಎಸ್., ರಿಥನ್ ಗೌಡ ಎಸ್.ಪಿ., ಶ್ರೀಶಾಂತ್, ಮೋಹಿತ್ ಬಿ.ಕೆ., ಭುವನ್ ಗೌಡ ಜಿ.ಎನ್., ಡಿ.ವಿ. ದೈವಿಕ್ ದರ್ಶನ್, ಪವನ್ ಕುಮಾರ್ ಟಿ., ಲೋಕೇಶ್ ಕೆ.ಜಿ., ತಸ್ಮೈ ಪಿ. ಗೌಡ, ದ್ವಿತೀಯ ಪಿಯುಸಿಯ ನಿಹಾನ್ ಶೆಟ್ಟಿ ವಿ.ಆರ್., ಉಜ್ವಲ್ ಮನೋಜ್ ತಾರಾ, ಚಿರಾಗ್ ಜಿ.ಯು., ಪವನ್ ವಿ.ವಿ., ಬಿ.ಜಿ. ವಿಲಾಸ್, ಗಗನ್ ಸಿ.ಎನ್., ಶ್ರೀಶಾಂತ್ ಎಸ್. ಭಾಗವಹಿಸಿದ್ದರು.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ತರಬೇತಿ ಪಡೆದಿತ್ತು. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here