ಅ.3: ನೆಲ್ಯಾಡಿ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

0

ಪುತ್ತೂರು: 33/11 ಕೆ.ವಿ. ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ, 33/11 ಕೆ.ವಿ. ನೆಲ್ಯಾಡಿ ವಿದ್ಯುತ್ ಉಪಕೇಂದ್ರದ ಪಾಲನಾ ಮತ್ತು ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.3ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ 33/11 ಕೆ.ವಿ. ನೆಲ್ಯಾಡಿ ವಿದ್ಯುತ್ ಉಪಕೇಂದ್ರದ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

33/11 ಕೆ.ವಿ. ನೆಲ್ಯಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here