ಬೊಬ್ಬೆಕೇರಿ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮದಿನಾಚರಣೆ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 157ನೇ ಮಹಾತ್ಮ ಗಾಂಧಿ ಜಯಂತಿ ಮತ್ತು 122ನೇ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯಗುರು ಶಶಿಕಲಾ ಅವರು ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜೀವನ ಸಾಧನೆಗಳ ಬಗ್ಗೆ ಪರಿಚಯಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಉಪಾಧ್ಯಕ್ಷ ತೀರ್ಥಕುಮಾರ್ ಪೈಕಹಾಗೂ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ರಾಷ್ಟ್ರನಾಯಕರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸಿದರು.

ಶಾಲಾ ಶಿಕ್ಷಕ ಜನಾರ್ದನ ಹೇಮಳ ಸ್ವಾಗತಿಸಿ, ವಂದಿಸಿದರು. ಶಿಕ್ಷಕಿಯರಾದ ಗೀತಾ ಕುಮಾರಿ, ಶೋಭಿತಾ, ಸುರೇಖಾ, ಶ್ರುತಿ, ದಿವ್ಯ, ಜಯಲತಾ, ಸುಶ್ಮಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here