ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಬಡಗನ್ನೂರು: “ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಯಾವಾಗಲೂ ಅಳವಡಿಸಿಕೊಳ್ಳಬೇಕು. ಸತ್ಯ ಮತ್ತು ಅಹಿಂಸೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟವರು ಮಹಾತ್ಮಗಾಂಧೀಜಿ. ಅವರ ಆದರ್ಶಗಳನ್ನು ಅನುದಿನವು ಪಾಲಿಸಬೇಕೆಂದು” ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕ  ವಿಘ್ನೇಶ್ ಹಿರಣ್ಯ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ  ಪ್ರೌಢಶಾಲಾ ಮುಖ್ಯ ಗುರು ಸುಮನ ಬಿ, ಪ್ರಾಥಮಿಕ ಶಾಲಾ ಮುಖ್ಯ ಗುರು  ರಾಜಗೋಪಾಲ್ ಎನ್, ಅಂಗ್ಲ ಮಾಧ್ಯಮ ಶಾಲಾ ಮುಖ್ಯಗುರು  ಪುಷ್ಪಾವತಿ  ಉಪಸ್ಥಿತರಿದ್ದರು.

ಹತ್ತನೇ ತರಗತಿಯ ಯಶ್ವಿತಾ ಗಾಂಧಿ ಜಯಂತಿಯ ಬಗ್ಗೆ ಮಾತುಗಳನ್ನಾಡಿದರು.ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಗುರು  ಪುಷ್ಪಾವತಿ  ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಗುರು ಸುಮನ ಬಿ ವಂದಿಸಿದರು  ಪ್ರೌಢಶಾಲಾ ಶಿಕ್ಷಕಿ  ಶೈಲಾಶ್ರೀ  ಕಾರ್ಯಕ್ರಮ ನಿರೂಪಿಸಿದರು.  ಕಾರ್ಯಕ್ರಮದಲ್ಲಿ  ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ   ಶಿಕ್ಷಕ ವೃಂದದವರು, ಸಿಬ್ಬಂದಿಗಳು ಅಕ್ಷರದಾಸೋಹ ಸಿಬ್ಬಂದಿಗಳು ಮತ್ತು ಶಾಲಾ ವಿದ್ಯಾರ್ಥಿಗಳು   ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here