ರಾಮಕುಂಜ: ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಅ.2ರಂದು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಯವರು ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಸ್ವಾತಂತ್ರ್ಯ ಹೋರಾಟದ ಸ್ಮರಣೀಯ ಕ್ಷಣಗಳನ್ನು ನೆನಪಿಸಿಕೊಳ್ಳುತ್ತಾ, ಗಾಂಧೀಜಿಯವರ ಅಹಿಂಸಾ ಮಾರ್ಗ, ಸತ್ಯಾಗ್ರಹಗಳ ತತ್ವಗಳಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಶಿಕ್ಷಕರು, ವಿದ್ಯಾರ್ಥಿಗಳು ಗಾಂಧೀಜಿಯವರ ತತ್ವಗಳನ್ನು ಅಳವಡಿಸಿಕೊಂಡು ಮಾದರಿ ವ್ಯಕ್ತಿಗಳಾಗಬೇಕೆಂದು ಹೇಳಿದರು.


ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ. ಉಪಸ್ಥಿತರಿದ್ದರು. ಸಹಶಿಕ್ಷಕ ಅಶ್ವತ್ ಎ.ಎನ್ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಹರೀಶ್ ಆಚಾರ್ಯ, ಗೈಡ್ಸ್ ಶಿಕ್ಷಕಿ ದಿವ್ಯಾ ಜಿ. ಸಹಕರಿಸಿದರು.

LEAVE A REPLY

Please enter your comment!
Please enter your name here