







ವಿಟ್ಲ: ಪೆರುವಾಯಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.


ಅ.2ರಂದು ಮಧ್ಯಾಹ್ನ ಪೆರುವಾಯಿ ಗ್ರಾಮದ ಪೆರುವಾಯಿಯಲ್ಲಿ ಸರಕಾರಿ ಜಾಗದಲ್ಲಿ ಹಣ ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಮಾಹಿತಿ ಮೇರೆಗೆ ಪಿಎಸ್‌ಐ ರಾಮಕೃಷ್ಣ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.



ಈ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಎಂಬವರನ್ನು ವಶಕ್ಕೆ ಪಡೆದಿದ್ದು, ಕೋಳಿಗಳು, ರೂ.3,050 ನಗದು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಅ.ಕ್ರಂ.203/2026, ಕಲಂ 87, 93 ಕೆಪಿ ಕಾಯ್ದೆ ಮತ್ತು ಕಲಂ 3, 11(1)(m)(ii), 11(1)(n) ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ಹಾಗೂ ಕಲಂ 112 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.










