ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಸಾಂದೀಪನಿಯ ವಿದ್ಯಾರ್ಥಿಗಳ ಆಯ್ಕೆ : 14ರ ವಯೋಮಾನದ ಬಾಲಕರ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

0

ಸವಣೂರು: ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.1ರಂದು ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಾಂದೀಪನಿಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14ರ ವಯೋಮಾನದ ಹುಡುಗರ ವಿಭಾಗದಲ್ಲಿ ಆರ್ಯನ್ ಕುಮಾರ್ (9ನೇ) ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ಪ್ರಥಮ, ವಿಷ್ಣುಜಿತ್ (8ನೇ) 100 ಮೀ, 200 ಮೀ, 400 ಮೀ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ, ಆಯುಷ್ (8ನೇ) 600 ಮೀ ಓಟದಲ್ಲಿ ಪ್ರಥಮ, ಧನ್ವಿ (7ನೇ) 400 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 4×100 ಮೀ ರಿಲೇಯಲ್ಲಿ ಪ್ರಥಮ ಸ್ಥಾನ ಹಾಗೂ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ.

17ರ ವಯೋಮಾನದಲ್ಲಿ ಗೌರವ್ (8ನೇ) ಉದ್ದ ಜಿಗಿತದಲ್ಲಿ ತೃತೀಯ, ತುಷಾರ್ (9ನೇ) 100 ಮೀ ಓಟದಲ್ಲಿ ದ್ವಿತೀಯ, 4×100 ಮೀ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಸ್ತ (10ನೇ) ಎತ್ತರ ಜಿಗಿತ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ, ಅರ್ಪಿತಾ (10ನೇ) ತ್ರಿವಿಧ ಜಿಗಿತದಲ್ಲಿ ದ್ವಿತೀಯ, ಅಂಜನಾ (9ನೇ) ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಮತ್ತು ಸುದೀಕ್ಷಾ ತರಬೇತಿ ನೀಡಿದ್ದು, ಶಾಲಾ ಅಧ್ಯಕ್ಷ ಜಯರಾಮ ಕೆದಿಲಾಯ ಎಸ್ ಮತ್ತು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ ಎಂದು ಮುಖ್ಯ ಶಿಕ್ಷಕ ಪ್ರಸನ್ನ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here