







ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸವಣೂರು ಮೊಗರು ಇಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನಾಚರಣೆ ಹಾಗೂ ಸ್ವತಂತ್ರ ಭಾರತದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಫೀಕ್ ಎಂ.ಎ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಸದಸ್ಯ ಕೇಶವ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.



ಕಾರ್ಯಕ್ರಮದಲ್ಲಿ ಸವಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಝಕ್ ಕೆನರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜಕಾರಿಯ ಮಾಂತೂರು, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಅನಿಷಾ, ಹಸೀನಾ ಹಾಗೂ ಕೇಶವ, ಮಾಜಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಉಮ್ಮರ್, ಸ್ಥಳೀಯ ಸಂಘ-ಸಂಸ್ಥೆಯ ಅಧ್ಯಕ್ಷರಾದ ಬಶೀರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯಗುರು ಮೋಹಿನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಜಾನಕಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕಿ ಜುಸ್ತಿನಾ ಲಿಡ್ವಿನ್ ಡಿಸೋಜ ವಂದಿಸಿದರು.
ಸಹಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು, ಪೋಷಕರು, ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.










