









ಸವಣೂರು: ಸವಣೂರು ವಲಯ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕದ ವಿದ್ಯಾರ್ಥಿನಿಯರು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.



ಬಾಲಕಿಯರ ವಿಭಾಗದ 4×100 ಮೀ. ರಿಲೇ ಸ್ಪರ್ಧೆಯಲ್ಲಿ 6ನೇ ತರಗತಿಯ ಜನನಿ, 7ನೇ ತರಗತಿಯ ವಿಶ್ಮ, ತನ್ವಿ ಮತ್ತು ಅನುಷ್ಯ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
200 ಮೀ. ಓಟದಲ್ಲಿ 7ನೇ ತರಗತಿಯ ವಿಶ್ಮ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 6ನೇ ತರಗತಿಯ ಜನನಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್, ಹಿರಿಯ ವಿದ್ಯಾರ್ಥಿ ಗುರುಪ್ರಸಾದ್ ಮತ್ತು ಶಾಲಾ ಮುಖ್ಯ ಗುರುಗಳು ತರಬೇತಿ ನೀಡಿದ್ದರು. ಶಾಲಾ ಶಿಕ್ಷಕ ವೃಂದ, ಎಸ್ಡಿಎಂಸಿ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ್ದಾರೆ.










