ಕೊಂಬೆಟ್ಟು:ಬೆಳೆದು ನಿಂತಿರುವ ಗಿಡಗಂಟಿಗಳ ರಾಶಿ, ವಿದ್ಯಾರ್ಥಿಗಳಿಗೆ, ಪಾದಚಾರಿಗಳಿಗೆ ನಡೆಯಲು ಅಸಾಧ್ಯವಾದ ಪರಿಸ್ಥಿತಿ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹಿಡಿದು ಕೊಂಬೆಟ್ಟು ಜ್ಯೂನಿಯರ್ ಕಾಲೇಜು ತನಕದ ರಸ್ತೆಯ ಇಕ್ಕೆಲಗಳಲ್ಲಿ ಗಿಡಗಂಟಿಗಳ ರಾಶಿ ಬೆಳೆದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ವಾಹನಗಳ ಸಂಚಾರದ ನಡುವೆ ನಡೆಯುವಂತಹ ಪರಿಸ್ಥಿತಿ ಎದುರಾಗಿದೆ.

ನಗರಸಭೆಗೆ ಮನವಿ ನೀಡಿದರೂ ಪ್ರಯೋಜನವಿಲ್ಲ: ಕೊಂಬೆಟ್ಟು ಜ್ಯೂನಿಯರ್ ಕಾಲೇಜು, ಮಹಾಲಿಂಗೇಶ್ವರ ಐಟಿಐ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸುಮಾರು 1500 ವಿದ್ಯಾರ್ಥಿಗಳು ಸದ್ರಿ ರಸ್ತೆಯಲ್ಲಿ ಶಾಲೆ, ಕಾಲೇಜಿಗೆ ಜೊತೆಗೆ ಜನಸಾಮಾನ್ಯರು ನಿತ್ಯವೂ ಸಂಚರಿಸುವುದು ಸಾಮಾನ್ಯವಾಗಿದೆ. ಪಾದಚಾರಿಗಳು ನಡೆಯುವ ಜಾಗದಲ್ಲಿ ಗಿಡಗಂಟಿಗಳ ರಾಶಿ ಬೆಳೆದು ರಸ್ತೆಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಇದರೊಂದಿಗೆ ವಿಷಜಂತುಗಳ ಭೀತಿ ಬೇರೆ. ಈ ಕುರಿತು ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನ ಎಸ್.ಡಿ.ಎಂಸಿ ಸಭೆಯಲ್ಲಿ ವಿಷಯ ಚರ್ಚಿಸಿ ನಗರಸಭೆಗೆ ಮನವಿ ನೀಡುವುದೆಂದು ತೀರ್ಮಾನಿಸಿ, ಕೂಡಲೇ ನಗರಸಭೆಗೆ ಮನವಿಯನ್ನು ನೀಡಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಲೇಜು ಎಸ್.ಡಿ.ಎಂ.ಸಿ ಸದಸ್ಯರು ಸುದ್ದಿಗೆ ಪ್ರತಿಕ್ರಿಯಿಸಿದ್ದಾರೆ. ಆದ್ದರಿಂದ ನಗರಸಭೆ ಈ ಕುರಿತು ಎಚ್ಚೆತ್ತು ರಸ್ತೆ ಬದಿಯ ಗಿಡಗಂಟಿಗಳ ರಾಶಿಯನ್ನು ತೆರವುಗೊಳಿಸಿ ಶಾಲಾ ಮಕ್ಕಳಿಗೆ, ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here