ಕ್ರೀಡಾಕೂಟದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು :ಸವಣೂರಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ತಾಲೂಕು ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ.


ಮಹಮ್ಮದ್ ಸಾಬಿತ್, ಹತ್ತನೇ ತರಗತಿ ವಿದ್ಯಾರ್ಥಿ ಗು೦ಡೆಸೆತದಲ್ಲಿ ಪ್ರಥಮ ಸ್ಥಾನ. ಹೃತೇಶ್ ಬಿ.ಎಸ್, ಹತ್ತನೇ ತರಗತಿ ಉದ್ದ ಜಿಗಿತ ದ್ವಿತೀಯ ಸ್ಥಾನ ಮತ್ತು ಆಯುಷ್ ಪಿ. ಗೌಡ ಎಂಟನೇ ತರಗತಿ ಇವರು 400 ಮೀ. ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಈ ಮೂವರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಶಿವಪ್ರಸಾದ್ ಆಳ್ವ ಮತ್ತು ಭರತ್ ರವರು ತರಬೇತಿ ನೀಡಿರುತ್ತಾರೆ ಎಂದು ಸಂಸ್ಥೆಯ ಸಂಚಾಲಕಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಪ್ರಾಂಶುಪಾಲೆ ಶಶಿಕಲ ಎಸ್.ಆಳ್ವ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here