ವಿಟ್ಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ವಾರೆಂಟ್ ಆರೋಪಿ ಬಂಧನ

0

ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಬಲ್ನಾಡು ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ. ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರನ್ನು ನಂಬಿಸಿ ಅವರಿಂದ ಹಣ ಪಡೆದು, ಉದ್ಯೋಗ ಕೊಡಿಸದೇ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2011ರಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ 420, 465, 468, 471 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಹಿಬ್ಬಾತುಲ್ಲ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ವಿಟ್ಲ ಠಾಣಾ ಸಿಬ್ಬಂದಿ ಶಿವಾನಂದ ಮಡ್ಡಿ, ಸಿದ್ದಪ್ಪ ಹಾಗೂ ಯಂಕಪ್ಪ ಅವರು ಅ.5ರಂದು ಹಿಬ್ಬಾತುಲ್ಲನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here