







ಅಧ್ಯಕ್ಷ: ಮೋಕ್ಷಿತ್ ಕಾರ್ಯದರ್ಶಿ: ಆಕಾಶ್ ಕೆ. ಯು.
ಜೊತೆ ಕಾರ್ಯದರ್ಶಿ: ಶ್ರದ್ದಾ ಪಂಡಿತ್


ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಪರಿಷತ್ ನ ಪದಾಧಿಕಾರಿಗಳ ವಿವಿಧ ಹುದ್ದೆಗಳಿಗೆ ಕಾಲೇಜು ಹಂತದ ಚುನಾವಣೆಯು ನಡೆಯಿತು.
ವಿದ್ಯಾರ್ಥಿ ಪರಿಷತ್ ನ ವಿದ್ಯಾರ್ಥಿ ನಾಯಕನ ಹುದ್ದೆಗೆ ಇಬ್ಬರು ವಿದ್ಯಾರ್ಥಿಗಳು ಸ್ಪರ್ಧಿಸಿದ್ದು, 3rd ಎಲ್ಎಲ್.ಬಿ.ಯ ವಿದ್ಯಾರ್ಥಿ ಮೋಕ್ಷಿತ್ ನಾಯಕನಾಗಿ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, 5th ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿ ಆಕಾಶ್ ಕೆ. ಯು. ಆಯ್ಕೆಯಾಗಿದ್ದಾರೆ. ಅದೇ ರೀತಿ ಜೊತೆ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಸ್ಪರ್ದಿಸಿದ್ದು, 5th ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿನಿ ಶ್ರದ್ದಾ ಪಂಡಿತ್ ಆಯ್ಕೆಯಾಗಿದ್ದಾರೆ.



ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಹಾಗೂ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ಮಾರ್ಗದರ್ಶನದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಲಕ್ಷ್ಮೀಕಾಂತ ಎ. ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.










