







ಪುತ್ತೂರು: 2 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಹಾಸನ ಬೇಲೂರು ನಿವಾಸಿ ವಿಶ್ವ ಬಂಧಿತ ಆರೋಪಿ. ಈತನ ವಿರುದ್ಧ ಅಕ್ರಮ ಮರಳು ಸಾಗಾಟ ಕೃತ್ಯಕ್ಕೆ ಸಂಬಧಿಸಿದಂತೆ ಉಪ್ಪಿನಂಗಡಿ ಠಾಣಾ ಪಿ.ಸಿ.ಆರ್ ಕ್ರಮಾಂಕ :01/18ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ ಸುಮಾರು 2 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಅ.6ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಪ್ರವೀಣ್, ಲಿಂಗರಾಜು ಅವರು ಹಾಸನದಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.













