







ಬಾಕಿ, ವ್ಯಾಜ್ಯಪೂರ್ವ ಪ್ರಕರಣಗಳ ರಾಜೀ ಸಂಧಾನಕ್ಕೆ ಅವಕಾಶ


ಪುತ್ತೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿ.12ರಂದು ರಾಜ್ಯದಾದ್ಯಂತ ಎಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ವರ್ಚುವಲ್ ಹಾಗೂ ಭೌತಿಕ ಎರಡೂ ವಿಧಾನಗಳಲ್ಲಿ ಲೋಕ ಅದಾಲತ್ನ್ನು ಆಯೋಜಿಸಲಾಗುತ್ತಿದೆ.



ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಆಸಕ್ತರಾಗಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ತಾಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ. ಇದರೊಂದಿಗೆ ನ್ಯಾಯಾಲಯಕ್ಕೆ ಇನ್ನೂ ದಾಖಲಾಗದ ವ್ಯಾಜ್ಯಪೂರ್ವ ಪ್ರಕರಣಗಳನ್ನೂ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಹೈಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಕೋರ್ಟ್, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ ಸ್ಥಾಪಿಸಲಾಗಿರುವ ಹೈಕೋರ್ಟ್ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿಗಳನ್ನು ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಂಬಂಧಪಟ್ಟ ಸಂಪರ್ಕ ಸಂಖ್ಯೆಗಳು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿವೆ.
ಹೆಚ್ಚಿನ ಮಾಹಿತಿಗಾಗಿ:
ವೆಬ್ಸೈಟ್: karnataka.nalsa.gov.in ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದಾಗಿದೆ. ರಾಷ್ಟ್ರೀಯ ಲೋಕ ಅದಾಲತ್ನ ಸದುಪಯೋಗ ಪಡೆದುಕೊಂಡು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ಪುತ್ತೂರು ನ್ಯಾಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.










