







ಪುತ್ತೂರು: ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಆಕ್ವಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.



ಈ ಪ್ರತಿಷ್ಠಿತ ಚಾಂಪಿಯನ್ ಶಿಪ್ ಭಾರತದಲ್ಲಿ ನಡೆಯುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು ಏಷ್ಯಾ ಅಕ್ವಟಿಕ್ ಮಾರ್ಗದರ್ಶನದಲ್ಲಿ ಭಾರತೀಯ ಈಜು ಒಕ್ಕೂಟದ ಆಥಿತ್ಯದಲ್ಲಿ ಕರ್ನಾಟಕ ಈಜು ಸಂಸ್ಥೆ ಆಯೋಜನ ಪಾಲುದಾರಿಕೆಯಲ್ಲಿ ನಡೆಯುತ್ತಿದೆ. ಭಾರತ, ಶ್ರೀಲಂಕ, ಇರಾನ್, ಥೈಲ್ಯಾಂಡ್,ಜಪಾನ್, ಚೀನಾ, ಓಮನ್, ಮಲೇಷ್ಯಾ,ದಕ್ಷಿಣ ಏಷ್ಯಾ ಸೇರಿದಂತೆ 9 ರಾಷ್ಟ್ರಗಳ 1500ಕ್ಕೂ ಹೆಚ್ಚು ಈಜುಗಾರರು ಈ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸುತಿದ್ದಾರೆ.













