ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆ ಅವರಿಗೆ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ

0

ಪುತ್ತೂರು: ಉಪತಹಶೀಲ್ದಾರ್ ಆಗಿರುವ ಸಾಹಿತಿ ಸುಲೋಚನ ಪಿ.ಕೆ. ಅವರ ‘ದಧೂಟಿಬನ’ ಕೃತಿಗೆ ಉಡುಪಿ ತುಳುಕೂಟದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಅ.4ರಂದು ಉಡುಪಿ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ 31ನೇ ವರ್ಷದ ವಿಶ್ವಪ್ರಭಾ ಪ್ರಯೋಜಿತ ಪಣಿಯಾಡಿ ಕಾದಂಬರಿ ಪ್ರಶಸ್ತಿ ನೀಡಿ ಗೌರವಿಸಿದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ ಬರೋಡ ಶಶಿಧರ ಶೆಟ್ಟಿ, ಬರೋಡ ತುಳು ಸಂಘದ ಗೌರವಾಧ್ಯಕ್ಷ ದಯಾನಂದ ಬೋಂಟ್ರ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ, ಉಡುಪಿ ಹೃದಯಂ ಫೌಂಡೇಶನ್‌ನ ಪ್ರವರ್ತಕ ಸುಭಾಷ್ ಸಾಲಿಯಾನ್ ನೆಲ್ಲಿಕಟ್ಟೆ ಹಾಗೂ ಸುಲೋಚನಾ ಅವರು ಪತಿ ಪ್ರದೀಪಕೃಷ್ಣ ಬಂಗಾರಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here