ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು :ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ಅ.2ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಚೇತನ, ರವೀಂದ್ರ, ವಿದ್ಯಾ ಆಯ್ಕೆಯಾದರು. 

2025-2026 ನೇ ಸಾಲಿನ ಅಧ್ಯಕ್ಷ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು. ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here