







ಪುತ್ತೂರು: ಕೌಡಿಚ್ಚಾರು ಗ್ರಾಮ ಪಂಚಾಯತ್ ಬಳಿ ಮೂರು ಮರಗಳಿದ್ದು, ಅವುಗಳ ಪಕ್ಕದಲ್ಲೇ ವಿದ್ಯುತ್ ಲೈನ್ ಹಾದು ಹೋಗಿದೆ. ಅ.7ರಂದು ಸಂಜೆ ವೇಳೆ ಮರದ ಗೆಲ್ಲು ತಗುಲಿ ವಿದ್ಯುತ್ ಲೈನ್‌ಗೆ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಸ್ಥಳೀಯರು ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಮರದ ಗೆಲ್ಲುಗಳನ್ನು ತೆರವುಗೊಳಿಸಿದ್ದಾರೆ.



ಪಕ್ಕದಲ್ಲೇ ಅರಣ್ಯ ಇಲಾಖೆಯ ಕಚೇರಿ ಇದ್ದು, ಮುಂದಿನ ದಿನಗಳಲ್ಲಿ ಈ ಮರಗಳಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಸಂಬಂಧಪಟ್ಟ ಇಲಾಖೆಯವರು ಶೀಘ್ರ ಮರ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.













