









ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವವು ಅ.11ರಿಂದ ಪ್ರಾರಂಭಗೊಂಡು ಅ.19ರವರೆಗೆ ನಡೆಯಲಿದೆ. ಪ್ರತಿದಿನ ಸಂಜೆ 4ರಿಂದ 7.30ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ವಾಸುದೇವ ತಂತ್ರಿ ಮತ್ತು ವೇದಮೂರ್ತಿ ಕುಂಟಾರು ರವೀಶ ತಂತ್ರಿ ಅವರ ಮಾರ್ಗದರ್ಶನದಲ್ಲಿ ಮದಕ ಶ್ರೀ ದೇವಿಯ ಸನ್ನಿಧಿಯಲ್ಲಿ ಕಾರ್ಯಕ್ರಮ ನಡೆಯಲಿದೆ.



ಭಕ್ತರು ಆಗಮಿಸಿ ಶ್ರೀ ರಾಜರಾಜೇಶ್ವರೀ ಮಾತೆಯ ಶ್ರೀಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶರನ್ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ ಪಡುಮಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










