









ಪುತ್ತೂರು: ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ ದ.ಕ ಜಿಲ್ಲೆ , ಡಾ. ಕೋಟ ಶಿವರಾಮ ಕಾರಂತರ ಬಾಲವನ ಅಭಿವೃದ್ಧಿ ಸಮಿತಿ ಸಹಾಯಕ ಆಯುಕ್ತರ ಕಛೇರಿ, ಪುತ್ತೂರು ಇದರ ವತಿಯಿಂದ ಅ.10ರಂದು ಪರ್ಲಡ್ಕ ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತ ಅವರು 125ನೇ ಜನ್ಮದಿನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳಿಗೆ ಆಗಮಿಸುವರಿಗೆ ನೆಹರುನಗರದ ಸುದಾನ ವಸತಿಯುತ ಶಾಲೆಯ ವತಿಯಿಂದ ಉಚಿತ ಬಸ್ ಸೌಲಭ್ಯ ಒದಗಿಸಲಾಗಿದೆ.



ಪೂರ್ವಾಹ್ನ 9.00 ಗಂಟೆಯಿಂದ ಪುತ್ತೂರಿನ ಶ್ರೀ ಮಹಮ್ಮಾಯಿ ದೇವಸ್ಥಾನದ ಬಳಿಯಿಂದ ಕಾರ್ಯಕ್ರಮ ನಡೆಯುವ ಪರ್ಲಡ್ಕ ಶಿವರಾಮ ಕಾರಂತ ಬಾಲವನದ ತನಕ ಉಚಿತ ಬಸ್ಸಿನ ವ್ಯವಸ್ಥೆಯನ್ನು ಒದಗಿಸಲಾಗಿದ್ದು ಆಸಕ್ತರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಸುದಾನ ವಸತಿಯುತ ಶಾಲೆ, ನೆಹರು ನಗರ ಇದರ ಸಂಚಾಲಕ ವಿಜಯ ಹಾರ್ವಿನ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.










